ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು.
ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು.
ಕುಮೇದ್ ಪುರ: ಪೆಟ್ರೋಲ್ ಸಾಗಿಸುತ್ತಿದ್ದ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆಯೊಂದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕುಮೇದ್ ಪುರ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದೆ. ಗೂಡ್ಸ್ ರೈಲಿನ 5 ಟ್ಯಾಂಕರುಗಳು ಹಳಿ ತಪ್ಪಿದ್ದು, ಯಾರಿಗೂ ಗಾಯಗಳಾಗಿಲ್ಲ. ಬೆಳಿಗ್ಗೆ 10.45 ರ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸವ್ಯಸಾಚಿ ತಿಳಿಸಿದ್ದಾರೆ.
ಕತಿಹಾರ್ ವಿಭಾಗದ ಕುಮೇದ್ ಪುರ ರೈಲ್ವೆ ನಿಲ್ದಾಣದಲ್ಲಿ ಹಾದು ಹೋಗುವ ಸಂದರ್ಭದಲ್ಲಿ ಈ ಗೂಡ್ಸ್ ರೈಲು (DN/IORG/BTPN/LD 70649) ಹಳಿ ತಪ್ಪಿದೆ. ರೈಲ್ವೆಯ ಪ್ರಮುಖ ಮಾರ್ಗದ ಸಂಚಾರ ಸ್ಥಗಿತಗೊಂಡಿದ್ದು, ಹಳಿ ದುರಸ್ತಿ ಕಾರ್ಯದಲ್ಲಿ ಸಿಬ್ಬಂಧಿಗಳು ತೊಡಗಿದ್ದಾರೆ. ದುರಸ್ತಿ ಬಳಿಕ ಸಂಚಾರ ಮತ್ತೆ ಆರಂಭವಾಗಲಿದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಈ ಅಪಘಾತಕ್ಕೆ ನಿಜವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.