ಒಡಿಶಾದ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿ ಊಟ ಸೇವಿಸಿದ ಸುಮಾರು 100 ವಿದ್ಯಾರ್ಥಿಗಳು ಅಸ್ವಸ್ಥ.
ಒಡಿಶಾದ ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿ ಊಟ ಸೇವಿಸಿದ ಸುಮಾರು 100 ವಿದ್ಯಾರ್ಥಿಗಳು ಅಸ್ವಸ್ಥ.
ಬಾಲಸೋರ್: ಒಡಿಶಾದ ಬಾಲಸೋರ್ ನ ಸಿರಾಪುರ ಗ್ರಾಮದ ಉದಯನಾರಾಯಣ ನೋಡಲ್ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ಊಟ ಮಾಡುವಾಗ ವಿದ್ಯಾರ್ಥಿಯೊಬ್ಬ ಆಹಾರದಲ್ಲಿ ಹಲ್ಲಿ ಸತ್ತು ಬಿದ್ದಿರುವುದನ್ನು ಗಮನಿಸಿದ್ದ, ತಕ್ಷಣವೇ ಶಾಲಾ ಅಧಿಕಾರಿಗಳು ಊಟ ವಿತರಣೆಯನ್ನು ನಿಲ್ಲಿಸಿ ಊಟ ಮಾಡದಂತೆ ಸೂಚಿಸಿದ್ದಾರೆ. ಹಲ್ಲಿ ಬಿದ್ದ ಊಟವನ್ನು ಸೇವಿಸಿದ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟದ ನಂತರ ಹೊಟ್ಟೆ ನೋವು ಮತ್ತು ಎದೆನೋವಿನ ಲಕ್ಷಣಗಳನ್ನು ಅನುಭವಿಸಿದರು. ಜಿಲ್ಲಾ ಆರೋಗ್ಯ ತಂಡವು ಶಾಲೆಗೆ ಆಗಮಿಸಿ ಅವರಿಗೆ ಚಿಕಿತ್ಸೆ ನೀಡಿದರು. ನಂತರ ಅವರನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಯಿತು.
ಈ ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದ ಆರೋಗ್ಯ ತಂಡವು ಇದರ ನಿಖರವಾದ ಕಾರಣವನ್ನು ನಿರ್ಧರಿಸಲು ಪರೀಕ್ಷೆಗಾಗಿ ಅಕ್ಕಿ ಮಾದರಿಗಳನ್ನು ಸಂಗ್ರಹಿಸಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.