ವಿದ್ಯಾರ್ಥಿಗಳ ಮೇಲೆ ಹಲ್ಲೆ – ದೈಹಿಕ ಶಿಕ್ಷಣ ಶಿಕ್ಷಕ ಅಮಾನತು.
ವಿದ್ಯಾರ್ಥಿಗಳ ಮೇಲೆ ಹಲ್ಲೆ – ದೈಹಿಕ ಶಿಕ್ಷಣ ಶಿಕ್ಷಕ ಅಮಾನತು.
ಸೇಲಂ: ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಂತರ್ ಶಾಲಾ ಫುಟ್ಬಾಲ್ ಪಂದ್ಯಾಟದಲ್ಲಿ ಕಳಪೆ ಪ್ರದರ್ಶನ ನೀಡಿದ ವಿದ್ಯಾರ್ಥಿಗಳ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಹಲ್ಲೆ ನಡೆಸಿದ ವಿಡಿಯೋ ಒಂದು ವೈರಲ್ ಆಗಿದ್ದು ಅದಾದ ನಂತರ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಸೇಲಂ ಜಿಲ್ಲೆಯ ಕೊಳತ್ತೂರಿನ ಖಾಸಗಿ ಹೈಯರ್ ಸೆಕೆಂಡರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಅಣ್ಣಾಮಲೈ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಕಳಪೆ ಪ್ರದರ್ಶನ ನೀಡಿದ ವಿದ್ಯಾರ್ಥಿಗಳ ಮೇಲೆ ತಮ್ಮ ಕಾಲಿನಿಂದ ಒದೆಯುವ ಮೂಲಕ ಮತ್ತು ಕೆನ್ನೆಗೆ ಹೊಡೆಯುವ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಕ ಕಿರುಕುಳ ನೀಡುತ್ತಿರುವುದನ್ನು ವಿದ್ಯಾರ್ಥಿಯೊಬ್ಬ ತನ್ನ ಸೆಲ್ ಫೋನ್ ನಲ್ಲಿ ವಿಡಿಯೋ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ. ನಂತರ ಇದನ್ನು ಪೋಷಕರು ಗಮನಿಸಿ ಆಘಾತಕ್ಕೆ ಒಳಗಾಗಿದ್ದಾರೆ. ಪೋಷಕರು ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಾಲಾ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಘಟನೆಯನ್ನರಿತು ಸೇಲಂ ಜಿಲ್ಲಾಧಿಕಾರಿ ಬೃಂದಾದೇವಿ ಶಿಕ್ಷಕನನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.