• 21 ನವೆಂಬರ್ 2024

ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ;ದೇಶದ ಜನತೆಗೆ ಶುಭಾಶಯ ಕೋರಿ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ.

 ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ;ದೇಶದ ಜನತೆಗೆ ಶುಭಾಶಯ ಕೋರಿ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ.
Digiqole Ad

ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ;ದೇಶದ ಜನತೆಗೆ ಶುಭಾಶಯ ಕೋರಿ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ.

ದೇಶದೆಲ್ಲೆಡೆ 78ನೇ ಸ್ವಾತಂತ್ರ ದಿನಾಚರಣೆ ಸಂಭ್ರಮ ಮನೆ ಮಾಡಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸತತ 11 ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅಸಂಖ್ಯಾತ ಸ್ವಾತಂತ್ಯ ಪ್ರೇಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ದಿನ, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ನಮ್ಮ ಪೂರ್ವಜರ ರಕ್ತ ನಮ್ಮಲ್ಲಿ ಹರಿಯುತ್ತಿದೆ ಅದು ಖುಷಿಯ ವಿಚಾರ. ಈ ದೇಶ ಅವರಿಗೆ ಋಣಿಯಾಗಿದೆ ಎಂದು ಪ್ರಧಾನಿ ಮೋದಿ ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು.

ಈ ಸುದ್ದಿಯನ್ನು ಓದಿದ್ದೀರಾ.?HAL ನಿಂದ ಮೊದಲ LCA ತರಬೇತಿ ವಿಮಾನ ವಾಯುಸೇನೆಗೆ ಹಸ್ತಾಂತರ

ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣ ಬಲಿದಾನ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಯಾವಾಗಲೂ ಋಣಿಯಾಗಿದ್ದೇವೆ. ರಾಷ್ಟ್ರದ ರಕ್ಷಣೆಗೆ ಯೋಗದಾನ ನೀಡಿದವರಿಗೂ ನನ್ನ ನಮನಗಳು ಎಂದು ಮೋದಿ ಹೇಳಿದರು. ವಿಕಸಿತ ಭಾರತ 2047 ದೃಢ ಸಂಕಲ್ಪದ ಪ್ರತಿಫಲನ ಹಾಗೂ 140 ಕೋಟಿ ಜನರ ಕನಸು. 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿಸಲು ಜನರು ಅನೇಕ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಿದರು. ಇದರಲ್ಲಿ ದೇಶವನ್ನು ಉತ್ಪಾದನಾ ಹಬ್‌, ಬೀಜದ ರಾಜಧಾನಿಯನ್ನಾಗಿಸುವುದು ಸೇರಿದೆ. ಆಡಳಿತ ಸುಧಾರಣೆ, ತ್ವರಿತ ನ್ಯಾಯದಾನ ವ್ಯವಸ್ಥೆ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳಿಗೆ ಉತ್ತೇಜನದ ಸಲಹೆಗಳನ್ನೂ ನೀಡಿದ್ದಾರೆ ಎಂದರು.

ಈ ಸುದ್ದಿಯನ್ನು ಓದಿದ್ದೀರಾ.?ಜಾತಿ ತಾರತಮ್ಯದೊಂದಿಗೆ ನುಡಿ ಸಮರ: ಪರಿಮಳ ಐವರ್ನಾಡು

ಇಂದು ತಮ್ಮ ಜೀವನದುದ್ದಕ್ಕೂ ಹೋರಾಡಿದ ಭಾರತಮಾತೆಯ ಅಸಂಖ್ಯಾತ ಭಕ್ತರಿಗೆ ಗೌರವ ಸಲ್ಲಿಸುವ ಹಬ್ಬವಾಗಿದ್ದು, ನಮ್ಮ ರೈತರು, ಸೈನಿಕರು ಮತ್ತು ಯುವಕರ ಸ್ವಾತಂತ್ರ್ಯದ ಬಗೆಗಿನ ಧೈರ್ಯ ಮತ್ತು ಭಕ್ತಿ ಜಗತ್ತಿಗೆ ಸ್ಪೂರ್ತಿದಾಯಕ ಘಟನೆಯಾಗಿದೆ. ಸ್ವಾತಂತ್ರ್ಯದ ಮೊದಲು, 40 ಕೋಟಿ ದೇಶವಾಸಿಗಳು ಉತ್ಸಾಹವನ್ನು ತೋರಿಸಿದರು ಮತ್ತು ಸಂಕಲ್ಪದೊಂದಿಗೆ ಮುನ್ನುಗ್ಗಿದ್ದರು. ಇಂದು ನಾವು 140 ಕೋಟಿ ಜನರಿದ್ದೇವೆ ನಾವೆಲ್ಲರೂ ಒಂದೇ ಸಂಕಲ್ಪ, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಮುನ್ನಡೆದರೆ ಖಂಡಿತವಾಗಿ ನಮ್ಮಮುಂದೆ ಬರುವ ಯಾವುದೇ ಸವಾಲನ್ನು ಎದುರಿಸುವ ಶಕ್ತಿ ನಮಗೆ ಬರುತ್ತದೆ ಎಂದು ಮೋದಿ ಹೇಳಿದರು. ಭಾರತ ಆದಷ್ಟು ಬೇಗ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಸ್ವಾವಲಂಬಿಯಾಗಬೇಕು,ಬಾಹ್ಯಾಕಾಶದಲ್ಲಿ ಭಾರತದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸಬೇಕು, ಭಾರತದ ಸಾಂಪ್ರದಾಯಿಕ ಔಷಧಗಳು ಮತ್ತು ಸ್ವಾಸ್ಥ್ಯವನ್ನು ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಭಾರತವು ಶೀಘ್ರವಾಗಿ ಸಾಧ್ಯವಾದರೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು ಎಂದು ಹೇಳಿದರು. ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ನಂತರ ಸತತ ಹನ್ನೊಂದು ಬಾರಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೂರನೇ ಪ್ರಧಾನಿಯಾಗಿದ್ದಾರೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ