70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ
70ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗಳು ಪ್ರಕಟವಾಗಿದ್ದು, ‘ಕಾಂತಾರ’ ಸಿನಿಮಾದ ನಟ ರಿಷಬ್ ಶೆಟ್ಟಿಗೆ ಈ ಬಾರಿಯ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಗೆ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ಕನ್ನಡ ಸಿನಿಮಾಕ್ಕೆ, ಕರ್ನಾಟಕದ್ದೇ ನಟನಿಗೆ ಒಲಿಯುತ್ತಿರುವ ಮೊದಲ ರಾಷ್ಟ್ರಪ್ರಶಸ್ತಿ ಇದು ಎನ್ನಲಾಗುತ್ತಿದೆ. ಕಾಂತಾರ ಸಿನಿಮಾ 10 ಫಿಲ್ಮ್‌ಫೇರ್ ಅವರಾಡ್ & 10 ಸೈಮಾ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಜೊತೆಗೆ ಇದೀಗ ರಾಷ್ಟ್ರೀಯ ಪ್ರಶಸ್ತಿ ಗರಿಯೂ ಸೇರಿಕೊಂಡಿದೆ. ಇದೇ ವೇಳೆ ಯಶ್ ಅಭಿನಯದ ಕೆಜಿಎಪ್ 2 ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಲಭಿಸಿದೆ.