• 22 ನವೆಂಬರ್ 2024

ಹೊಸನಗರ: ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತಿದ್ದ 9 ಅಡಿ ಉದ್ದದ ಕಾಳಿಂಗ ಸರ್ಪ- ಉರಗ ತಜ್ಞರಿಂದ ರಕ್ಷಣೆ.

 ಹೊಸನಗರ: ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತಿದ್ದ 9 ಅಡಿ ಉದ್ದದ ಕಾಳಿಂಗ ಸರ್ಪ- ಉರಗ ತಜ್ಞರಿಂದ ರಕ್ಷಣೆ.
Digiqole Ad

ಹೊಸನಗರ: ಶಾಲೆಯ ಬಿಸಿಯೂಟ ಕೊಠಡಿಯಲ್ಲಿ ಅವಿತಿದ್ದ 9 ಅಡಿ ಉದ್ದದ ಕಾಳಿಂಗ ಸರ್ಪ- ಉರಗ ತಜ್ಞರಿಂದ ರಕ್ಷಣೆ.

ಹೊಸನಗರ: ತಾಲೂಕಿನ ಸಂಪೆಕಟ್ಟೆಯ ಮತ್ತಿಕೈ ಶಾಲೆಯ ಬಿಸಿಯೂಟ ದಾಸ್ತಾನು ಕೊಠಡಿಯಲ್ಲಿ ಸೋಮವಾರ 9 ಅಡಿ ಗಾತ್ರದ ಕಾಳಿಂಗ ಸರ್ಪ ಕಂಡು ಬಂದಿದ್ದು, ಬೆಳಗ್ಗೆ ಅಡುಗೆ ಸಹಾಯಕಿ ಪ್ರೇಮ ಅಕ್ಕಿ ಬೇಳೆಗಾಗಿ ಬಿಸಿ ಊಟದ ದಾಸ್ತಾನು ಕೊಠಡಿಯ ಬಾಗಿಲು ತೆರೆದಾಗ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಶನಿವಾರವೇ ಕಾಳಿಂಗ ಸರ್ಪ ಒಳಗಡೆ ಸೇರಿತ್ತು ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಶಾಲೆಯ ಮುಖ್ಯ ಶಿಕ್ಷಕ ಸುಪ್ರೀತ್ ಡಿಸೋಜ ಕೊಠಡಿಯ ಬಾಗಿಲು ಹಾಕಿ ಹಾವನ್ನು ಬಂಧಿ ಮಾಡಿದ್ದಾರೆ. ನಂತರ ಪೋಷಕರಿಗೆ ಸುದ್ದಿ ಮುಟ್ಟಿಸಲಾಯಿತು. ಆಗುಂಬೆ ಮಳೆ ಕಾಡು ಸಂಶೋಧನ ಕೇಂದ್ರದ ಉರಗ ತಜ್ಞ ಅಜಯಗಿರಿ ಅವರನ್ನು ಅರಣ್ಯ ಇಲಾಖೆಯ ಮೂಲಕ ಸಂಪರ್ಕಿಸಲಾಯಿತು. ಉರಗ ತಜ್ಞ ಅಜಯಗಿರಿ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟರು. ಮಕ್ಕಳು ಮತ್ತು ಪೋಷಕರಿಗೆ ಇದರ ಕುರಿತು ಮುಂಜಾಗ್ರತೆ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ನಗರ ವಲಯ ಅರಣ್ಯ ಅಧಿಕಾರಿ ಸಂತೋಷ್ ಮಲ್ಲನಗೌಡರ್ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.

ಈ ಸುದ್ಧಿ ಓದಿದ್ದೀರಾ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ!…

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ