ಉಪ್ಪಿನಂಗಡಿ ಗ್ರಾಮ ಪಂಚಾಯತ್ ನಲ್ಲಿ ಟೈಲರಿಂಗ್ ತರಬೇತಿ ಉದ್ಘಾಟನೆ
ಉಪ್ಪಿನಂಗಡಿ ಗ್ರಾಮ ಪಂಚಾಯತ್ ನಲ್ಲಿ ಟೈಲರಿಂಗ್ ತರಬೇತಿ ಉದ್ಘಾಟನೆ
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು, ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಗ್ರಾಮ ಪಂಚಾಯತ್ ಉಪ್ಪಿನಂಗಡಿ ಹಾಗೂ ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಎರಡು ತಿಂಗಳ ಹೊಲಿಗೆ ತರಬೇತಿಯನ್ನು ಉದ್ಘಾಟಿಸಲಾಯಿತು. ಶ್ರೀ ವಿಶ್ವನಾಥ ಶೆಟ್ಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಶುಭ ಹಾರೈಸಿದರು. ಶ್ರೀ ವೆಂಕಟರಮಣ ಶಾಖಾ ವ್ಯವಸ್ಥಾಪಕರು ಬ್ಯಾಂಕ್ ಆಫ್ ಬರೋಡ ಉಪ್ಪಿನಂಗಡಿ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ಭಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡುತ್ತಾ ಸ್ವ-ಉದ್ಯೋಗದ ನಿಯಮಗಳು, ಸ್ವ-ಉದ್ಯೋಗಕ್ಕೆ ಸಿಗುವ ಬ್ಯಾಂಕ್ ಸೌಲಭ್ಯಗಳು ಹಾಗೂ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಶ್ರೀಮತಿ ಸುಗುಣಾವತಿ ಸೀನಿಯರ್ ವ್ಯವಸ್ಥಾಪಕರು ಬ್ಯಾಂಕ್ ಆಫ್ ಬರೋಡ ಮಂಗಳೂರು ವಿವಿಧ ವಿಮಾ ಯೋಜನೆಗಳ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಶ್ರೀಮತಿ ಲಲಿತಾ ಗ್ರಾಮ ಪಂಚಾಯತ್ ಅಧ್ಯಕ್ಷರು, ಶ್ರೀಮತಿ ವಿದ್ಯಾ ಲಕ್ಷ್ಮಿ ಪ್ರಭು ಉಪಾಧ್ಯಕ್ಷರು, ಶ್ರೀಮತಿ ಗೀತಾ ಶೇಖರ್ ಪಂಚಾಯತ್ ಕಾರ್ಯದರ್ಶಿಯವರು, ಶ್ರೀಮತಿ ನಳಿನಿ ತಾಲೂಕು ವ್ಯವಸ್ಥಾಪಕರು ಕೃಷಿಯೇತರ ಚಟುವಟಿಕೆ, ಶ್ರೀಮತಿ ನೀಲಾವತಿ ದಿವ್ಯ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಉಪ್ಪಿನಂಗಡಿ ಇದರ ಅಧ್ಯಕ್ಷರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಪಶುಸಖಿ ಶ್ರೀಮತಿ ಜಯಲಕ್ಷ್ಮಿ, ಸಂಜೀವಿನಿ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಚೈತ್ರ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಜೀವಿನಿ ಸದಸ್ಯರು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು