ಶಿರೂರು:ಮತ್ತೆ ಭೂಕುಸಿತ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ.
ಶಿರೂರು:ಮತ್ತೆ ಭೂಕುಸಿತ – ಸ್ಥಳೀಯರಲ್ಲಿ ಹೆಚ್ಚಿದ ಆತಂಕ.
ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರ ಶಿರೂರು ಭಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಜುಲೈ 16ರಂದು ಭೂಕುಸಿತವಾಗಿ 11 ಜನರು ಸಾವನ್ನಪ್ಪಿದ್ದರು, ಇದರಲ್ಲಿ ಮೂರು ಜನರ ಶವ ಪತ್ತೆಯಾಗಿರಲಿಲ್ಲ. ಶವ ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಸಲಾಗಿತ್ತು. ಇದೀಗ ಶಿರೂರಿನ ಅಲ್ಲಲ್ಲಿ ಭೂಕುಸಿತ ಉಂಟಾಗುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜಿಯಾಲೋಜಿಕಲ್ ಸರ್ವೆ ಆಫ್ ಇಂಡಿಯಾ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಭೂ ಕುಸಿತವಾಗುತ್ತಿರುವ ಬಗ್ಗೆ ಅಧ್ಯಯನ ನಡೆಸುತ್ತಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಾದು ಹೋಗು ಕಾರವಾರದ ಬಿಣಗ, ಅಂಕೋಲದ ಶಿರೂರು, ಹೊನ್ನಾವರದ ಗುಣವಂತೆ ಹೆದ್ದಾರಿ, ಭಟ್ಕಳದ ಹೆದ್ದಾರಿ ಭಾಗದಲ್ಲಿ ಮತ್ತೆ ಭೂಕುಸಿತವಾಗಲಿದೆ ಎಂದು ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ತಜ್ಞರ ತಂಡ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತದ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.