ಕಡಬದಲ್ಲಿ ಸರಕಾರಿ ಶಾಲಾ ಕಟ್ಟಡ ಕುಸಿತ : ಮುಖ್ಯ ಶಿಕ್ಷಕ ಮತ್ತು ಎಂಜಿನಿಯರನ್ನು ಅಮಾನತು ಮಾಡಿದ ಜಿಲ್ಲಾಧಿಕಾರಿ.
ಕಡಬದಲ್ಲಿ ಸರಕಾರಿ ಶಾಲಾ ಕಟ್ಟಡ ಕುಸಿತ : ಮುಖ್ಯ ಶಿಕ್ಷಕ ಮತ್ತು ಎಂಜಿನಿಯರನ್ನು ಅಮಾನತು ಮಾಡಿದ ಜಿಲ್ಲಾಧಿಕಾರಿ.
ಕಡಬ: ಕಡಬ ತಾಲೂಕಿನ ಪೆರಾಬೆ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಒಂದು ಭಾಗ ಕುಸಿದ ಘಟನೆ ನಿನ್ನೆ ಮಧ್ಯಾಹ್ನದ ವೇಳೆಗೆ ನಡೆದಿದೆ, ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಕಿ ಉಳಿದ ಎಲ್ಲಾ ಮಕ್ಕಳು ಆಟದ ಮೈದಾನದಲ್ಲಿದ್ದರು. ಶಿಥಿಲಗೊಂಡಿದ್ದ ಶಾಲಾ ಕಟ್ಟಡದ ಹಿಂಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಜೆಸಿಬಿಯಲ್ಲಿ ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಶಿಥಿಲಗೊಂಡಿದ್ದ ಕಟ್ಟಡಕ್ಕೆ ಹಾನಿಯಾದುದರಿಂದ ಛಾವಣಿ ಸಹಿತ ಕಟ್ಟಡ ಕುಸಿದು ಬಿದ್ದಿದೆ. ಈ ಘಟನೆಗೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲಾ ಮುಖ್ಯ ಶಿಕ್ಷಕ ರಮೇಶ್ ಅವರನ್ನು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅಮಾನತು ಮಾಡಿದ್ದಾರೆ.ಈ ಸರಕಾರಿ ಶಾಲೆಗೆ 75 ವರ್ಷ ತುಂಬುತ್ತಿದ್ದು, ಕುಸಿದು ಬಿದ್ದಿರುವ ಕಟ್ಟಡವನ್ನು ಸುಮಾರು 50 ವರ್ಷದ ಹಿಂದೆ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಅದಕ್ಕೆ ಸರಿಯಾದ ಅಡಿಪಾಯ ಇರಲಿಲ್ಲ. ಗೋಡೆಗಳು ಬಿರುಕು ಬಿಟ್ಟು ಶಿಥಿಲಾವಸ್ಥೆಯಲ್ಲಿತ್ತು. ಹೀಗಿದ್ದರೂ ತರಾತುರಿಯಲ್ಲಿ ತಡೆಗೋಡೆ ನಿರ್ಮಾಣಕ್ಕೆ ಪ್ರಾರಂಭಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಆದೇಶದ ಮೇರೆಗೆ ಇಂದು ಈ ಶಾಲೆಗೆ ರಜೆ ಘೋಷಿಸಲಾಗಿದೆ.
ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.
WWW.GOLDFACTORYNEWS.COM
Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.