• 24 ಮಾರ್ಚ್ 2025

ಇಂದಿನಿಂದ 5 ದಿನಗಳ ಕಾಲ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಸ್ಥಗಿತ

 ಇಂದಿನಿಂದ 5 ದಿನಗಳ ಕಾಲ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಸ್ಥಗಿತ
Digiqole Ad

ಇಂದಿನಿಂದ 5 ದಿನಗಳ ಕಾಲ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ಸ್ಥಗಿತ

ಪಾಸ್‌ಪೋರ್ಟ್ ಅರ್ಜಿಗಳ ನಿರ್ವಹಣೆ ಮಾಡುವ ಆನ್‌ಲೈನ್ ಪೋರ್ಟಲ್ ತಾಂತ್ರಿಕ ನಿರ್ವಹಣೆ ಕಾರಣ 5 ದಿನಗಳ ಕಾಲ ಸ್ಥಗಿತಗೊಳ್ಳಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೆ.2ರಂದು ಬೆಳಗ್ಗೆ 6 ಗಂಟೆಯವರೆಗೆ ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತನ್ನ ಕಾರ್ಯವನ್ನು ಸ್ಥಗಿತಗೊಳಿಸಲಿದೆ. ಈ ಅವಧಿಯಲ್ಲಿ ನಾಗರಿಕರಿಗೂ ಹಾಗೂ ಎಲ್ಲಾ ಎಂಇಎ, ಆರ್‌ಪಿಓ, ಬಿಓಐ, ಐಎಸ್‌ಪಿ, ಡಿಓಪಿ, ಪೊಲೀಸ್ ಅಧಿಕಾರಿಗಳಿಗೆ ಸಿಸ್ಟಮ್‌ಗಳು ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಯಾವುದೇ ಹೊಸ ಅಪಾಯಿಂಟ್‌ಮೆಂಟ್‌ಗಳನ್ನು ಸ್ವೀಕರಿಸುವುದಿಲ್ಲ ಹಾಗೂ ಮೊದಲು ಕಾಯ್ದಿರಿಸಿದ ಎಲ್ಲಾ ಅಪಾಯಿಂಟ್‌ಮೆಂಟ್‌ಗಳನ್ನು ಮರು ನಿಗದಿಪಡಿಸಲಾಗುವುದು ಎಂದು ತಿಳಿಸಿದೆ. ಆ.30 ರವರೆಗೆ ಬುಕ್ಕಿಂಗ್ ಆಗಿರುವ ಎಲ್ಲಾ ಅಪಾಯಿಂಟ್‌ಮೆಂಟ್‌ಗಳನ್ನು ಮರು ನಿಗದಿಪಡಿಸಲಾಗುವುದು ಎಂದು ಪಾಸ್‌ಪೋರ್ಟ್ ಸೇವಾ ಪೋರ್ಟಲ್ ತಿಳಿಸಿದೆ. ಪಾಸ್‌ಪೋರ್ಟ್ ಸೇವಾ ಪೋರ್ಟಲ್ ದೇಶಾದ್ಯಂತ ಹೊಸ ಪಾಸ್‌ಪೋರ್ಟ್ ಗಳ ಅರ್ಜಿ ಸಲ್ಲಿಸಲು ಹಾಗೂ ನವೀಕರಿಸಲು ಅಪಾಯಿಂಟ್‌ ಮೆಂಟ್‌ಗಳ ನಿಗದಿಗಾಗಿ ಕಾರ್ಯನಿರ್ವಹಿಸುತ್ತದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ