• 21 ನವೆಂಬರ್ 2024

ಡೆಂಗ್ಯೂ ವನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿದ ರಾಜ್ಯ ಸರ್ಕಾರ.

 ಡೆಂಗ್ಯೂ ವನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿದ ರಾಜ್ಯ ಸರ್ಕಾರ.
Digiqole Ad

ಡೆಂಗ್ಯೂ ವನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಣೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಸೂಚಿಸಿದಂತೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಸೆಕ್ಷನ್ 3 ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಡೆಂಗ್ಯೂ ಜ್ವರವನ್ನು ‘ಸಾಂಕ್ರಾಮಿಕ ರೋಗ’ ಎಂದು ಅಧಿಸೂಚನೆ ಹೊರಡಿಸಿದೆ. 2020ರ ಸೆಕ್ಷನ್ 4 ಮತ್ತು 16 ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ಸರ್ಕಾರವು ಹಲವು ನಿಯಮಗಳನ್ನು ರೂಪಿಸಿದೆ. ಇನ್ನು ಮುಂದೆ ನೈರ್ಮಲ್ಯ ಕಾಪಾಡದವರಿಗೆ ದಂಡ ಬೀಳಲಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಬೆಂಗಳೂರಿನಲ್ಲಿ ಈಗಾಗಲೇ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ