• 2 ನವೆಂಬರ್ 2024

ಸುರತ್ಕಲ್ : ಮಸೀದಿಗೆ ಕಲ್ಲು ತೂರಾಟ: ತೀವ್ರಗೊಂಡ ಪೊಲೀಸ್ ತನಿಖೆ.

 ಸುರತ್ಕಲ್ : ಮಸೀದಿಗೆ ಕಲ್ಲು ತೂರಾಟ: ತೀವ್ರಗೊಂಡ ಪೊಲೀಸ್ ತನಿಖೆ.
Digiqole Ad

ಸುರತ್ಕಲ್ : ಮಸೀದಿಗೆ ಕಲ್ಲು ತೂರಾಟ: ತೀವ್ರಗೊಂಡ ಪೊಲೀಸ್ ತನಿಖೆ.

ಸುರತ್ಕಲ್ : ಮಂಗಳೂರಿನ ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ನಿನ್ನೆ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ ಮೂರನೇ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ರಾತ್ರಿ 10.30 ರ ಸುಮಾರಿಗೆ ಬೈಕುಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಯ ಗಾಜು ಪುಡಿಪುಡಿಯಾಗಿದೆ. ಈದ್ ಮಿಲಾದ್ ಹಬ್ಬದ ಹಿಂದಿನ ದಿನವೇ ಈ ಘಟನೆ ನಡೆದಿದ್ದು ಬಹಳ ಆತಂಕಕ್ಕೆ ಕಾರಣವಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಪೋಲಿಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಪೊಲೀಸರ ತನಿಖೆ ತೀವ್ರಗೊಂಡಿದೆ.

ಇದನ್ನು ಓದಿದ್ದೀರಾ: ಇಲ್ಲಿ ಎಲ್ಲರಿಗೂ ಖಚಿತ ಬಹುಮಾನ! ಇಂದೇ ನೊಂದಾಯಿಸಿ.

WWW.GOLDFACTORYNEWS.COM

Gold Factory News is a Karnataka-based web news channel. It offers comprehensive coverage of local, national, and international events. Known for its quality journalism, Gold Factory News provides unbiased news and in-depth analysis. The channel’s dedicated team of journalists ensures timely and accurate reporting. Gold Factory News is rapidly gaining recognition for its integrity and excellence in news reporting.

Digiqole Ad

ಈ ಸುದ್ದಿಗಳನ್ನೂ ಓದಿ