ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಚಾಲನೆ.
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ಚಾಲನೆ.
ಬೆಂಗಳೂರು : ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಇದು ಕರ್ನಾಟಕದ 10ನೇ ವಂದೇ ಭಾರತ್ ರೈಲಾಗಿದೆ.
ಹುಬ್ಬಳ್ಳಿ- ಪುಣೆ- ಹುಬ್ಬಳ್ಳಿ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲು ಎರಡು ವಾಣಿಜ್ಯ ಮಹಾನಗರಗಳನ್ನು ಸಂಪರ್ಕಿಸುವ ಕೊಂಡಿಯಾಗಿದೆ. ಈ ರೈಲು ಒಟ್ಟು ಎಂಟು ಭೋಗಿಗಳನ್ನು ಹೊಂದಿದ್ದು, ಒಟ್ಟು 530 ಆಸನಗಳನ್ನು ಹೊಂದಿದೆ.