ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನ.
ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನ.
ದೇಶದ ಅತಿ ದೊಡ್ಡ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನದ ಕಾರ್ಯ ಪ್ರಾರಂಭಗೊಂಡಿದ್ದು ಸುಳ್ಯ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಸುಳ್ಯ ವಿಧಾನ ಸಭಾ ಕ್ಷೇತ್ರದ ಸುಳ್ಯದ ಹಳೆ ಗೇಟು , ಸವಣೂರು ಪೇಟೆ ಪಾಲ್ತಾಡಿ ಗ್ರಾಮ, ಕೇಮ್ರಾಜೆ ನೆಲ್ಲೂರು ಮಹಾಶಕ್ತಿ ಕೇಂದ್ರ ಸೇರಿದಂತೆ ವಿವಿಧ ಕಡೆಗಳಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತ ಬಂಧುಗಳು ತಾವೆಲ್ಲರೂ ಸದಸ್ಯತ್ವ ಪಡೆದುಕೊಂಡು ಅತ್ಯಂತ ದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ ಎಂದು ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ. ಬಿ ಕೆ ತಿಳಿಸಿರುತ್ತಾರೆ.