• 19 ಫೆಬ್ರವರಿ 2025

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು.

 ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು.
Digiqole Ad

ಅಮೇರಿಕಾದ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು.

ವಾಷಿಂಗ್ಟನ್: ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಹತ್ಯೆ ನಡೆಸುವ ಯಂತ್ರ ನಡೆದಿದೆ. ಗಾಲ್ಫ್ ಕ್ಲಬ್ ನಲ್ಲಿ ಆಟವಾಡುತ್ತಿದ್ದಾಗ ಟ್ರಂಪ್ ಮೇಲೆ ಫೈಯರಿಂಗ್ ಮಾಡಲಾಗಿದ್ದು ಅದೃಷ್ಟಾವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಲ್ಫ್ ಕ್ಲಬ್ ಬಳಿ ವ್ಯಕ್ತಿಯೊಬ್ಬ ಬಂದು ಗುಂಡು ಹಾರಿಸಿದ್ದಾನೆ ಕೂಡಲೇ ಅವನನ್ನು ನೋಡಿದ ಭದ್ರತಾ ಸಿಬ್ಬಂದಿ ಅವನ ಮೇಲೆ ದಾಳಿ ನಡೆಸಿದ್ದಾರೆ. ಅವನು ಓಡಿ ಹೋಗಲು ಪ್ರಯತ್ನಿಸಿದ್ದಾನೆ. ನಂತರ ಅವನನ್ನು ಬಂಧಿಸಲಾಗಿದ್ದು, ಆತನನ್ನು ರಾಯನ್ ವೆಸ್ಲೆ ರೂತ್(58) ಎಂದು ಗುರುತಿಸಲಾಗಿದೆ. ಘಟನೆ ನಡೆದ ನಂತರ ಟ್ರಂಪ್ ತನ್ನ ಬೆಂಬಲಿಗರಿಗೆ ‘ನಾನು ಸುರಕ್ಷಿತವಾಗಿದ್ದೇನೆ ಮತ್ತು ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ’ ಎಂದು ಹೇಳಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಪೆನಿನ್ಸುಲದಲ್ಲಿ ಚುನಾವಣಾ ಪ್ರಚಾರದ ವೇಳೆ ಟ್ರಂಟ್ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದರು ಅವರ ಕಿವಿಗೆ ಗಾಯವಾಗಿದ್ದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.

ಈ ಸುದ್ದಿ ಓದಿದ್ದೀರಾ.?

Digiqole Ad

ಈ ಸುದ್ದಿಗಳನ್ನೂ ಓದಿ