ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ.
ದೆಹಲಿಯ ನೂತನ ಸಿಎಂ ಆಗಿ ಅತಿಶಿ ಮರ್ಲೆನಾ ಆಯ್ಕೆ.
ನವದೆಹಲಿ : ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಕಲ್ಕಾಜಿ ಕ್ಷೇತ್ರ ಶಾಸಕಿ ಅತಿಶಿ ಮರ್ಲೆನಾ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಅವರು ಕೇಜ್ರಿವಾಲ್ ಸಂಪುಟದಲ್ಲಿ ಜಲಸಂಪನ್ಮೂಲ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮದ್ಯ ನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಬಂದಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎರಡು ದಿನಗಳ ಹಿಂದೆಯಷ್ಟೇ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆದ ಆಮ್ ಆದ್ಮಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಅತಿಶಿ ಮರ್ಲೆನಾ ಅವರ ಹೆಸರನ್ನು ಸಿಎಂ ಸ್ಥಾನಕ್ಕೆ ಪ್ರಸ್ತಾಪಿಸಿದ್ದಾರೆ.