• 5 ಅಕ್ಟೋಬರ್ 2024

ದುಬಾರಿ ಆಗ್ತಿದೆ ಈರುಳ್ಳಿ… ರೇಟ್ ಎಷ್ಟು ಗೊತ್ತಾ?

 ದುಬಾರಿ ಆಗ್ತಿದೆ ಈರುಳ್ಳಿ… ರೇಟ್ ಎಷ್ಟು ಗೊತ್ತಾ?
Digiqole Ad

ದುಬಾರಿ ಆಗ್ತಿದೆ ಈರುಳ್ಳಿ… ರೇಟ್ ಎಷ್ಟು ಗೊತ್ತಾ?

ಬೆಂಗಳೂರು : ದಿನದಿಂದ ದಿನಕ್ಕೆ ಸಾಮಾನ್ಯ ಜನರ ಬದುಕು ದುಬಾರಿಯಾಗುತ್ತಿದೆ, ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು ಇದರಿಂದ ಬಡವರು, ಮಧ್ಯಮ ವರ್ಗದವರು ಜೀವನ ನಡೆಸುವುದೇ ಕಷ್ಟವಾಗಿ ಹೋಗಿದೆ. ಇದೀಗ ಮತ್ತೆ ಈರುಳ್ಳಿ ಬೆಲೆ ಏರಿಕೆಯಾಗಿದ್ದು ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಕರ್ನಾಟಕದ ಹಲವಡೆ ಅತಿಯಾದ ಮಳೆಯ ಕಾರಣ ಬೆಲೆ ನಾಶವಾಗಿದ್ದು, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೆ ಕೊಳೆತು ಹೋಗುತ್ತಿದೆ. ಇದರಿಂದಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 70 ರೂ. ಆಗಿದೆ.

 ದಸರಾ ಹಬ್ಬ ವೇಳೆಗೆ ಈರುಳ್ಳಿಯ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.ಈ ಹಿಂದೆ ಉತ್ತರ ಕರ್ನಾಟಕ ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆ ಆಗುತ್ತಿತ್ತು ಆದರೆ ಇದೀಗ ಉತ್ತರ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದ್ದು ಮಳೆಗೆ ಈರುಳ್ಳಿ ಕುಳಿತು ಹೋಗುತ್ತಿದೆ. ಹೀಗಾಗಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ. ರಾಜ್ಯದಲ್ಲಿ ಹೆಚ್ಚು ಮಳೆ ಆಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಕುಸಿತ ಉಂಟಾಗಿದೆ. ಹೀಗಾಗಿ ಮಾರುಕಟ್ಟೆಗೆ ಈರುಳ್ಳಿ ಬರುತ್ತಿಲ್ಲ.

 ಈರುಳ್ಳಿ ಬೆಲೆ ಮಾತ್ರವಲ್ಲದೆ ಈ ಮಧ್ಯೆ ಬೆಳ್ಳುಳ್ಳಿ ಬೆಲೆಯೂ ಕೂಡ ಏರಿಕೆಯಾಗಿದೆ. ಬೆಳ್ಳುಳ್ಳಿ ಕೆಜಿಗೆ 400 ರೂ. ಆಗಿದೆ ತರಕಾರಿಗಳ ಬೆಲೆ ಕೂಡ ಕೊಂಚ ಜಾಸ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಈರುಳ್ಳಿ, ಬೆಳ್ಳುಳ್ಳಿ ಮತ್ತು ಇತರ ತರಕಾರಿಗಳ ಬೆಲೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಒಟ್ಟಿನಲ್ಲಿ ಮಳೆಯ ಕಾರಣದಿಂದಾಗಿ ಈರುಳ್ಳಿ ಬೆಲೆ ಒಂದೇ ವಾರದಲ್ಲಿ ಏರಿಕೆಯಾಗಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ