ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ:
ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿ:
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿದೆ ಈ ಮೂಲಕ ರಾಷ್ಟ್ರೀಯ ಸಾಹಸ ಪ್ರವಾಸೋದ್ಯಮ ಪ್ರಶಸ್ತಿಗೆ ಪಾತ್ರವಾದ ಕರ್ನಾಟಕದ ಏಕೈಕ ಗ್ರಾಮವೆಂಬ ಹೆಗ್ಗಳಿಕೆಗೂ ಪಾತ್ರವಾಗಿದೆ ಪ್ರವಾಸೋದ್ಯಮ ಸಚಿವಾಲಯ ಕಳೆದ ವರ್ಷ ದೇಶದ ಗ್ರಾಮಗಳಲ್ಲಿ ಸ್ಪರ್ಧಾತ್ಮಕತೆ ಮತ್ತು ಸ್ವಾವಲಂಬನೆಯ ಒಲವು ಹೆಚ್ಚಿಸುವುದಕ್ಕಾಗಿ ‘ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್’ ಪ್ರಾರಂಭಿಸಿತ್ತು ಇದರ ಅಡಿಯಲ್ಲಿ ಪ್ರತಿ ಕ್ಯಾಟಗರಿಯಿಂದ ಅತ್ಯುತ್ತಮ 5 ಪ್ರವಾಸೋದ್ಯಮ ಗ್ರಾಮಗಳನ್ನು ಗುರುತಿಸಲಾಗುತ್ತದೆ.