• 25 ಜನವರಿ 2025

ವೈದ್ಯರ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕ ಸಾವು :

 ವೈದ್ಯರ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕ ಸಾವು :
Digiqole Ad

ವೈದ್ಯರ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕ ಸಾವು :

ಚಿಕ್ಕಮಗಳೂರು : ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯರೊಬ್ಬರು ನೀಡಿದ ಇಂಜೆಕ್ಷನ್ ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ ಮಗ ಸೋನೇಶ್ ಮೃತ ಬಾಲಕ.
ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಬಾಲಕನ ಪೋಷಕರು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ವೈದ್ಯ ವರುಣ್ ಸೊಂಟಕ್ಕೆ ಇಂಜೆಕ್ಷನ್ ಕೊಟ್ಟಿದ್ದು ಇದೇ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ