ವಿಧಾನ ಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ ಆಯ್ಕೆ
ವಿಧಾನ ಪರಿಷತ್ ಉಪಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ ಆಯ್ಕೆ :
ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿಯವರು ರಾಜೀನಾಮೆ ನೀಡಿ ತೆರವಾದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ದಕ್ಷಿಣ ಕನ್ನಡ ಉಡುಪಿ ಕ್ಷೇತ್ರದಿಂದ ಪುತ್ತೂರಿನ ಕಿಶೋರ್ ಬೊಟ್ಯಾಡಿ ಹೆಸರನ್ನು ಆಯ್ಕೆ ಮಾಡಿದೆ.
ವರ್ಷಗಳ ಹಿಂದೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಇವರನ್ನು ಈಗ ದಕ್ಷ ಕನ್ನಡ ಉಡುಪಿ ಜಿಲ್ಲೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.