ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ:
ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ:
ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನಾಳೆಯಿಂದ ಅಕ್ಟೋಬರ್ 20 ರ ತನಕ ದಸರಾ ರಜೆ ಘೋಷಿಸಿದೆ. ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ.
ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ. 2024-25 ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿದೆ.