ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಪೋಲಿಸ್ ಪೇದೆ ಹೃದಯಾಘಾತಕ್ಕೆ ಬಲಿ:
ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಪೋಲಿಸ್ ಪೇದೆ ಹೃದಯಾಘಾತಕ್ಕೆ ಬಲಿ:
ಬೀದರ್: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪೊಲೀಸ್ ಪೇದೆಯೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ಬೀದರ್ ನಗರದ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ.
ರಾಯಚೂರು ಮೂಲದ ಚಂದ್ರಶೇಖರ್ (29) ಮೃತ ಪೊಲೀಸ್ ಪೇದೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.
ಗಾಂಧಿ ಜಯಂತಿಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ಪೇದೆ ಚಂದ್ರಶೇಖರ್ ಮೃತಪಟ್ಟಿದ್ದಾರೆ.