ಸವಣೂರು ಶ್ರೀ ರಾಮ ಸಂಜೀವಿನಿ ಒಕ್ಕೂಟದಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ :
ಸವಣೂರು ಶ್ರೀ ರಾಮ ಸಂಜೀವಿನಿ ಒಕ್ಕೂಟದಿಂದ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ :
ಇಂದು ಶ್ರೀರಾಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ( ರಿ) ಸವಣೂರು ಪಂಚಾಯತ್ ಇದರ ವತಿಯಿಂದ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಹಾಗೂ ಘನ ತ್ಯಾಜ್ಯ ಘಟಕದ ಬಗ್ಗೆ ಮನೆ ಮನೆಗೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಹಾಗೂ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಕರಪತ್ರ ಹಂಚಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಂದರಿ ಬಿ ಶ್ರೀರಾಮ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವಿಜಯ ಈಶ್ವರ ಗೌಡ ಒಕ್ಕೂಟದ ಉಪಾಧ್ಯಕ್ಷ ರಾದ ದಮಯಂತಿ ಬಸ್ತಿ ಜೊತೆ ಕಾರ್ಯದರ್ಶಿ ಸುಶ್ಮಿತಾ ಉಪ್ಪಳಿಗೆ ಒಕ್ಕೂಟದ ಸಂಪನ್ಮೂಲ ವ್ಯಕ್ತಿಗಳು ಘಟಕದ ಸಿಬ್ಬಂದಿಗಳು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.