• 2 ನವೆಂಬರ್ 2024

ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನೆ

 ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನೆ
Digiqole Ad

ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನೆ

ಕಡಬ ತಾಲೂಕು ಚಾರ್ವಾಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಗಾಂಧಿ ಜಯಂತಿ ಆಚರಣೆ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ನ ಉದ್ಘಾಟನ ಕಾರ್ಯಕ್ರಮವು ನಡೆಯಿತು . ಸ್ಕೌಟ್ಸ್ ಮತ್ತು ಗೈಡ್ಸ್ ನ ಉದ್ಘಾಟನೆಯನ್ನು ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಮಧುಶ್ರೀ ಅವರು ನೆರವೇರಿಸಿ ಮಕ್ಕಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ನ ಅನುಕೂಲತೆಯ ಬಗ್ಗೆ ಮಾಹಿತಿ ನೀಡಿದರು.

ಸಭಾಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿಯವರು ವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಬಿರಾರ್ಥಿಗಳ ಕರ್ತವ್ಯದ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಶಾಲಾ ಮುಖ್ಯ ಗುರುಗಳಾದ ಪದ್ಮಯ ಗೌಡ ಸ್ವಾಗತಿಸಿ ಸ್ಕೌಟ್ಸ್ ಗೈಡ್ಸ್ ತರಬೇತಿದಾರರಾದ ಸಹಶಿಕ್ಷಕರಾದ ಸುನಿಲ್ ಮತ್ತು ನಂದಿನಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು ,ಶಿಕ್ಷಕ ವೃಂದ, ಮಕ್ಕಳು ಭಾಗವಹಿಸಿದರು. ಸಹ ಶಿಕ್ಷಕಿಯಾದ ಮೋಹಿನಿ ಅವರು ಧನ್ಯವಾದ ಅರ್ಪಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ