• 18 ಮಾರ್ಚ್ 2025

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ!

 ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ!
Digiqole Ad

ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ!

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1575 ಹಿರಿಯ ನಾಗರಿಕರು ಆಶ್ರಯ ಪಡೆಯುತ್ತಿದ್ದಾರೆ. ಇನ್ನೂ19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ರಾಜ್ಯದಲ್ಲಿ ಒಟ್ಟು 57.91 ಲಕ್ಷ ಹಿರಿಯ ನಾಗರಿಕರಿದ್ದು ಹಿರಿಯ ನಾಗರಿಕರಿಗೆ ಆರೋಗ್ಯ ವಿಮೆ ಒದಗಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ವೃದ್ಧಾಪ್ಯ ವೇತನ ಹೆಚ್ಚಿಸುವಂತೆ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ