ಕರ್ನಾಟಕ: ಗುಡುಗು ಸಹಿತ ಭಾರೀ ಮಳೆ ಎಚ್ಚರಿಕೆ:
ಕರ್ನಾಟಕ: ಗುಡುಗು ಸಹಿತ ಭಾರೀ ಮಳೆ ಎಚ್ಚರಿಕೆ:
ಬೆಂಗಳೂರು : ಕರ್ನಾಟಕ ರಾಜ್ಯದ್ಯಂತ ಇಂದು ಹಗುರದಿಂದ ಸಾಧಾರಣ ಮಳೆ ಯೊಂದಿಗೆ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗಲಿದ್ದು, ಬೆಂಗಳೂರಿನಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
33 ಡಿ.ಸೆ ಗರಿಷ್ಠ ತಾಪಮಾನ ಮತ್ತು 22 ಡಿ.ಸೆ ಕನಿಷ್ಠ ತಾಪಮಾನ ಇರಲಿದೆ.