• 21 ಮಾರ್ಚ್ 2025

ತುಳುನಾಡಿನಲ್ಲಿ ಇಂದಿನಿಂದ ನವರಾತ್ರಿ ಆಚರಣೆ :

 ತುಳುನಾಡಿನಲ್ಲಿ ಇಂದಿನಿಂದ ನವರಾತ್ರಿ ಆಚರಣೆ :
Digiqole Ad

ತುಳುನಾಡಿನಲ್ಲಿ ಇಂದಿನಿಂದ ನವರಾತ್ರಿ ಆಚರಣೆ :

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಅ.3ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು, ವಿವಿಧ ದೇವಾಲಯಗಳನ್ನು ವಿದ್ಯುತ್‌ ದೀಪ, ಹೂವು, ತಳಿರು ತೋರಣಗಳಿಂದ ಅಲಂಕರಿಸಲಾಗಿದೆ.
ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.
ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಸಹಿತ ವಿವಿಧ ದೇವಿ ಆಲಯಗಳಲ್ಲಿ ನವರಾತ್ರಿಯ ವಿಶೇಷ ಪೂಜೆ ನೆರವೇರಲಿದೆ.


“ಮಂಗಳೂರು ದಸರಾ’ ಖ್ಯಾತಿಯ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹಾಗೂ ರಥಬೀದಿಯ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ ವಿಜೃಂಭಣೆ ಯಿಂದ ನೆರವೇರಲಿದೆ. ಮಂಗಳೂರು ದಸರಾ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ, ಸರಕಾರಿ, ಖಾಸಗಿ ಕಟ್ಟಡಗಳನ್ನು ವಿದ್ಯುತ್‌ ದೀಪಾಲಂಕಾರಗೊಳಿಸಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ