ಬೆಂಗಳೂರಿನಲ್ಲಿ ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ :
ಬೆಂಗಳೂರಿನಲ್ಲಿ ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ :
ಬೆಂಗಳೂರು: ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸಮಾಡಿಕೊಂಡಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆ ಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತ ಪಾಕಿಸ್ತಾನ ಪ್ರಜೆಗಳ ವಿಚಾರಣೆಯ ವೇಳೆ ಮತ್ತಷ್ಟು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ಸುಸುಳಿ ಬಂದಿರುವುದಾಗಿದೆ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪಾಕ್ ಪ್ರಜೆಗಳು ಬಂಧನವಾಗುವ ಸಾಧ್ಯತೆ ಇದೆ.