ಗೃಹಲಕ್ಷ್ಮಿ ಹಣಕ್ಕೆ ಕಾಯುತ್ತಿರುವವರಿಗೆ ಗುಡ್ ನ್ಯೂಸ್ :
ಗೃಹಲಕ್ಷ್ಮಿ ಹಣಕ್ಕೆ ಕಾಯುತ್ತಿರುವವರಿಗೆ ಗುಡ್ ನ್ಯೂಸ್ :
ರಾಜ್ಯ ಸರ್ಕಾರವು ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ನೀಡಿದೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ
ಹಣಕ್ಕಾಗಿ ಎದುರು ನೋಡುತ್ತಿದ್ದ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ಹಂಚಿದೆ ಗೃಹಲಕ್ಷ್ಮೀ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ ನವರಾತ್ರಿ ಹಬ್ಬದ ತಯಾರಿಯಲ್ಲಿರುವ ಮಹಿಳೆಯರ ಸಂತೋಷವನ್ನು ಇನ್ನಷ್ಟು ಹೆಚ್ಚು ಮಾಡಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರೆಡಿಯಾಗಿದ್ದಾರೆ ತಾಂತ್ರಿಕ ಕಾರಣದಿಂದ ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಿರಲಿಲ್ಲ ಎರಡು ತಿಂಗಳ ಹಣ ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ ಎಂದು ಹೇಳಿದ್ದಾರೆ ಜುಲೈ ತಿಂಗಳ ಕಂತಿನ ಹಣವನ್ನು ಇದೇ ತಿಂಗಳು ಅಂದರೆ ಅಕ್ಟೋಬರ್ 7 ನೇ ತಾರೀಕಿನಂದು ಹಾಗೂ ಆಗಸ್ಟ್ ತಿಂಗಳ ಹಣವನ್ನು ಇದೇ ತಿಂಗಳು 9 ರಂದು ಜಮಾವಣೆ ಮಾಡಲಾಗುತ್ತದೆ ಈ ಯೋಜನೆಯಿಂದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗುತ್ತಿದೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ