• 8 ಫೆಬ್ರವರಿ 2025

ಮಾಜಿ ಶಾಸಕ ಮೊಯ್ದೀನ್ ಬಾವ ಸಹೋದರ ನಾಪತ್ತೆ.!

 ಮಾಜಿ ಶಾಸಕ ಮೊಯ್ದೀನ್ ಬಾವ ಸಹೋದರ ನಾಪತ್ತೆ.!
Digiqole Ad

ಮಾಜಿ ಶಾಸಕ ಮೊಯ್ದೀನ್ ಬಾವ ಸಹೋದರ ನಾಪತ್ತೆ.!

ಮಂಗಳೂರು: ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಲ್ತಾಜ್ ಅಲಿ (52) ಅವರು  ದಿಢೀ‌ರ್ ನಾಪತ್ತೆಯಾಗಿದ್ದಾರೆ. ಇಂದು ನಸುಕಿನ ವೇಳೆ 3 ಗಂಟೆಗೆ ನನಗೆ ಕೆಲಸ ಇದೆ ಎಂದು ಹೇಳಿ ಹೊರತಿದ್ದರು ಎಂದು ಹೇಳಲಾಗಿದೆ. ಕೂಳೂರಿನ ಫಲ್ಗುಣಿ ನದಿ ಸೇತುವೆಯ ಮೇಲೆ ಅಪಘಾತವಾದ ಸ್ಥಿತಿಯಲ್ಲಿ ಅವರ ಕಾರು ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ ಕುಳೂರು ಸೇತುವೆ ಬಳಿ ಉದ್ಯಮಿ ಮುಮ್ತಾಜ್ ಅಲಿ ವಾಹನ ಪತ್ತೆಯಾಗಿದೆ. ಅವರು ಸೇತುವೆಯಿಂದ ಜಿಗಿದಿರಬಹುದು ಎಂಬ ಶಂಕೆ ಇದ್ದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಮೊಯ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದಾರೆ. ನಾನು ಸಾಯುತಿದ್ದೇನೆ ಎಂದು ಅಲಿ ಮನೆಯವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದ್ದು. ಅವರ ಮಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಈಶ್ವರ ಮಲ್ಪೆ ಹಾಗೂ ತಂಡ ಎಸ್‌ಡಿಆರ್‌ಎಫ್‌ ಮತ್ತು ಕೋಸ್ಟ್ ಗಾರ್ಡ್ ತಂಡಗಳು ನದಿಯಲ್ಲಿ ಹುಡುಕಾಟ ನಡೆಸುತ್ತಿವೆ ಎಂದು ಪೊಲೀಸ್ ಕಮಿಷನ‌ರ್
ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ