ದಕ್ಷಿಣ ಕನ್ನಡ ಪರಿಷತ್ ಉಪ ಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು :
ದಕ್ಷಿಣ ಕನ್ನಡ ಪರಿಷತ್ ಉಪ ಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು :
ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಗೆ ಒಟ್ಟು ನಾಲ್ವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮೊಹಮ್ಮದ್ ರಿಯಾಝ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಆದುದರಿಂದ ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.
ರಾಜು ಪೂಜಾರಿ (ಕಾಂಗ್ರೆಸ್), ಕಿಶೋರ್ ಬಿ ಆರ್ (ಬಿಜೆಪಿ), ಅನ್ವರ್ ಸಾದತ್ ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಹಾಗೂ ದಿನಕರ ಉಳ್ಳಾಲ್ (ಪಕ್ಷೇತರ) ಅವರು ಕಣದಲ್ಲಿದ್ದಾರೆ. ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.