• 18 ಅಕ್ಟೋಬರ್ 2024

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ
Digiqole Ad

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ:

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಇಂದು ನಡೆದಿದ್ದು, ‘ಕಾಂತಾರ’ ಸಿನಿಮಾ ಖ್ಯಾತಿಯ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮತ್ತು ಅತ್ಯುತ್ತಮ ನಟಿಯಾಗಿ ನಿತ್ಯಾ ಮೆನನ್ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಅತ್ಯುತ್ತಮ ಮನೋರಂಜನಾ ಚಿತ್ರ ‘ಕಾಂತಾರ’ ಮತ್ತು ನಟ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.
ನಿತ್ಯಾ ಮೆನನ್ ಅವರಿಗೆ ‘ತಿರುಚಿತ್ರಂಬಲಂ’ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ಕ್ಯಾಟಗರಿಯಲ್ಲಿ ‘ಕೆಜಿಎಫ್ 2’ ಗೆ ರಾಷ್ಟ್ರ ಪ್ರಶಸ್ತಿ ದೊರಕಿದೆ.

Digiqole Ad

ಈ ಸುದ್ದಿಗಳನ್ನೂ ಓದಿ