ಇಂದು ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಎರಡನೇ ಟಿ20 ಪಂದ್ಯ:
ಇಂದು ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಎರಡನೇ ಟಿ20 ಪಂದ್ಯ:
ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಎರಡನೇ ಟಿ20 ಪಂದ್ಯವು ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಾಟವು ಬಾಂಗ್ಲಾದೇಶ್ ತಂಡದ ಪಾಲಿಗೆ ನಿರ್ಣಾಯಕ ಪಂದ್ಯವಾಗಿದೆ.
ಗ್ವಾಲಿಯರ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದ ಮೂಲಕ ಸರಣಿ ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಟೀಂ ಇಂಡಿಯಾದ ಮುಂದಿದೆ. ಈ ಪಂದ್ಯವು ಇಂದು ರಾತ್ರಿ 7 ಗಂಟೆಗೆ ಆರಂಭವಾಗಲಿದೆ.