ದೇಶ ಕಂಡ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ😰
ದೇಶ ಕಂಡ ಖ್ಯಾತ ಉದ್ಯಮಿ ರತನ್ ಟಾಟಾ ಇನ್ನಿಲ್ಲ😰
ಭಾರತ ಕಂಡ ಬಹುದೊಡ್ಡ ಉದ್ಯಮಿ ಮತ್ತು ಟಾಟಾ ಸನ್ಸ್ ಗ್ರೂಪಿನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಒಂದು ದಿನದ ಹಿಂದೆಯೇ ರತನ್ ಟಾಟಾ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಗಂಭೀರ ಸ್ಥಿತಿಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಟಾಟಾ ಹೆಸರಿನಲ್ಲಿ ಹತ್ತಾರು ಕಂಪನಿಗಳನ್ನು ಕಟ್ಟಿ ಬೆಳೆಸುವ ಜೊತೆಗೆ ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರತನ್ ಟಾಟಾ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.ಉದ್ಯಮಿಗಳಿಂದ ಹಿಡಿದು ರಾಜಕೀಯ ನಾಯಕರವರೆಗೆ ನೂರಾರು ಮಂದಿ ರತನ್ ಟಾಟಾ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.