ಉಡುಪಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ.
ಉಡುಪಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ.
ಉಡುಪಿ: ನಕಲಿ ಪಾಸ್ಪೋರ್ಟ್ ಮೂಲಕ ದುಬೈಗೆ ತೆರಳಲು ಉಡುಪಿಯಿಂದ ಬಂದಿದ್ದ ಬಾಂಗ್ಲಾ ಪ್ರಜೆಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಇಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ಮೊಹಮ್ಮದ್ ಮಾಣಿಕ್ ಹುಸೈನ್ (26) ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಹೆಚ್ಚಿನ ವಿವರಣೆ ನಡೆಸಿದಾಗ ಈತ ಬಾಂಗ್ಲಾದೇಶದಿಂದ ಅಕ್ರಮವಾಗಿ ಪಶ್ಚಿಮ ಬಂಗಾಳ ಗಡಿ ಮೂಲಕ ಭಾರತ ಪ್ರವೇಶಿಸಿದ್ದ ಮತ್ತು ಸುಮಾರು 5 ವರ್ಷಗಳಿಂದ ಉಡುಪಿಯಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ.
ನಕಲಿ ಪಾಸ್ಪೋರ್ಟ್ ಬಳಸಿ ದುಬೈಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.