ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಜಯನಗರ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೋರ್ವ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗಂಡ ಬೊಮ್ಮನಹಳ್ಳಿಯಲ್ಲಿ ಇಂದು ನಡೆದಿದೆ.
21 ವರ್ಷದ ಚೇತನ್ ಕುಮಾರ್ ಸಾವನ್ನಪ್ಪಿದ ಯುವಕ.
ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾಲು ಜಾರಿ ಯುವಕ ಕೆರೆಗೆ ಬಿದ್ದಿದ್ದಾನೆ. ಆತ ಕೆರೆಗೆ ಬಿದ್ದ ಕೂಡಲೇ ಅಕ್ಕ ಪಕ್ಕದ ಜನರು ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಲಿಲ್ಲ. ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ ಯುವಕನ ಶವ 200 ಮೀಟರ್ ದೂರದಲ್ಲಿ ಸಿಕ್ಕಿದೆ.