ತುಳುನಾಡಿನಲ್ಲಿ ದಸರಾ ಇಂದು ವೈಭವದ ಬೃಹತ್ ಶೋಭಾಯಾತ್ರೆ:
ತುಳುನಾಡಿನಲ್ಲಿ ದಸರಾ ಇಂದು ವೈಭವದ ಬೃಹತ್ ಶೋಭಾಯಾತ್ರೆ:
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.
ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯುವ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಶ್ರೀ ಮಹಾಗಣಪತಿ, ನವದುರ್ಗೆಯರ ಹಾಗೂ ಶಾರದಾ ಮಾತೆಯ ವರ್ಣರಂಜಿತ ಬೃಹತ್ ದಸರಾ ಶೋಭಾಯಾತ್ರೆ, ಅತ್ಯಾಕರ್ಷಕ ವಿದ್ಯುದ್ದೀಪಾಲಂಕೃತ ಮಂಟಪದೊಂದಿಗೆ ಹೊರಡಲಿದೆ. ಶೋಭಾಯಾತ್ರೆಗೆ ಹಲವು ಸ್ತಬ್ಧಚಿತ್ರಗಳು, ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ಕಲಾತಂಡಗಳು, ಹುಲಿವೇಷ ಸಹಿತ ಇತರ ವೇಷಗಳು, ಚೆಂಡೆ ತಂಡಗಳು ಮೆರುಗು ನೀಡಲಿವೆ.