• 3 ನವೆಂಬರ್ 2024

ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…

 ರೈಲು ಡಿಕ್ಕಿ ಹೊಡೆದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…
Digiqole Ad

ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ‌ಕಾಮಾಜೆ ನಿವಾಸಿ ಕರುಣಾಕರ (35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ
ಮರದ ಕೆಲಸ ಮಾಡುತ್ತಿದ್ದ ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಕರುಣಾಕರ ಅವರೇ ಮನೆಯ ಆಧಾರಸ್ತಂಭವಾಗಿದ್ದರು.
ಕಳೆದ ಎರಡು ವರ್ಷಗಳ ‌ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣುಮಗುವಿದೆ.
ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿಕ್ಕಿಯಾಗಿದೆ.ಬಿಸಿರೋಡಿನ ರೈಲು ಸ್ಟೇಷನ್ ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ