ಹರಿಯಾಣ: ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ:
ಹರಿಯಾಣ: ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ:
ಹರಿಯಾಣ ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೀಗ ಹರಿಯಾಣದಲ್ಲಿ ಮೂರನೇ ಬಾರಿ ಬಿಜೆಪಿ ಸರ್ಕಾರ ರಚನೆಯಾಗಲಿದೆ.
ಪಂಚಕುಲದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ನೂತನ ಮುಖ್ಯ ಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಮಧ್ಯಾಹ್ನ 1.15 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಈ ಕಾರ್ಯಕ್ರಮಕ್ಕೆ ಪಂಚಕುಲದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯ ಮಂತ್ರಿಗಳು ಕೂಡ ಭಾಗವಹಿಸಲಿದ್ದಾರೆ. ನಯಾಬ್ ಸಿಂಗ್ ಸೈನಿ ಹೊರತುಪಡಿಸಿ ಒಟ್ಟು 12 ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.