• 17 ಅಕ್ಟೋಬರ್ 2024

ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ!.

 ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ!.
Digiqole Ad

ರೈಲ್ವೆ ಇಲಾಖೆಯಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ!

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ 120 ದಿನಗಳ ಬದಲು 60 ದಿನಗಳ ಮೊದಲು ಪ್ರಯಾಣಿಕರು ಟಿಕೆಟ್ ಬುಕ್ಕಿಂಗ್ ಮಾಡಬಹುದು. ನವೆಂಬರ್ 1 ರಿಂದಲೇ ಈ ಹೊಸ ನಿಯಮ ಜಾರಿಗೆ ಬರಲಿದೆ. ಐ ಆರ್ ಸಿ ಟಿ ಸಿ ಬುಕ್ಕಿಂಗ್ ಪ್ರಕಾರ, ರೈಲ್ವೆ ಟಿಕೆಟ್ ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ ಎಂದು ಘೋಷಿಸಿದೆ. ಈ ಹೊಸ ನಿಯಮ ಜಾರಿಗೆ ತರುವ ಮೂಲಕ ಟಿಕೆಟ್ ರಹಿತ ಪ್ರಯಾಣಕ್ಕೆ ಭಾರತೀಯ ರೈಲ್ವೆ ಇಲಾಖೆ ಕಡಿವಾಣ ಹಾಕಿದೆ. ಮುಂಗಡ ರೈಲು ಟಿಕೆಟ್ ಬುಕ್ಕಿಂಗ್ ಗೆ ಹೊಸ ನಿಯಮಗಳು ನವೆಂಬರ್ 1 ರ ಮೊದಲು ಮಾಡಿದ ಬುಕ್ಕಿಂಗ್ ಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಕ್ಟೋಬರ್ 31ರವರೆಗೆ ಮಾಡಿದ ಎಲ್ಲಾ ಬುಕ್ಕಿಂಗ್ ಗಳು ಹಾಗೆಯೇ ಉಳಿಯುತ್ತವೆ. ವಿದೇಶಿ ಪ್ರವಾಸಿಗರಿಗೆ 365 ದಿನಗಳ ಮಿತಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

Digiqole Ad

ಈ ಸುದ್ದಿಗಳನ್ನೂ ಓದಿ