ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ವಿತರಣೆ ಪ್ರಾರಂಭ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ವಿತರಣೆ ಪ್ರಾರಂಭ:
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳ ಪಡಿತರ ವಿತರಣೆ ಪ್ರಾರಂಭಗೊಂಡಿದೆ. ಸರ್ವರ್ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು.
ಈ ತಿಂಗಳ ಪಡಿತರವನ್ನು ಅ.31ರ ಒಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್ ಬಯೋಮೆಟ್ರಿಕ್ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.