• 3 ಡಿಸೆಂಬರ್ 2024

ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

 ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Digiqole Ad

ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

ಬೆಳ್ಮ ಗ್ರಾಮದ ಕಲ್ಲಪಾದೆ ಬಳಿ ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದು, ಚಾಲಕ ಸಹಿತ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇರಳಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ, ಬಡಕಬೈಲು ಮಹಮ್ಮದ್‌ ಬಿ. ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (9) ಮೃತಪಟ್ಟ ವಿದ್ಯಾರ್ಥಿನಿ.
ಮದಕ ಭಾಗದಿಂದ ದೇರಳಕಟ್ಟೆ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ.
ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ