ನಾಣಿಲ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ
ನಾಣಿಲ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ
ಕಡಬ ತಾಲೂಕು ಚಾರ್ವಾಕ ಗ್ರಾಮದ ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ದಲಾರಿಯವರು ವಹಿಸಿದ್ದರು.ಕಾರ್ಯಕ್ರಮದಲ್ಲಿ ಮಾರ್ಗದರ್ಶನ ಅಧಿಕಾರಿಯಾದ ಕಾಣಿಯೂರು ಪ್ರೌಢಶಾಲೆಯ ಸಹ ಶಿಕ್ಷಕಿ ಪ್ರಮೋದಿನಿ ಶೈಕ್ಷಣಿಕ ಮಾಹಿತಿ ನೀಡಿದರು.ಈ ಸಂಧರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಲ, ಅಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕ ವೃಂದ, ಪೋಷಕರು ಭಾಗವಹಿಸಿದ್ದರು.ಶಾಲಾ ಮುಖ್ಯ ಗುರುಗಳಾದ ಪದ್ಮಯ್ಯ ಗೌಡ ಸ್ವಾಗತಿಸಿ, ಶಿಕ್ಷಕ ಸುನೀಲ್ ಧನ್ಯವಾದ ಅರ್ಪಿಸಿದರು.