ಪಿಲಿಕುಲ ನಿರ್ಸಗಧಾಮ: ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ!
ಪಿಲಿಕುಲ ನಿರ್ಸಗಧಾಮ: ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ!
ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ಚಾರ್ಜ್‌ಗೆಂದು ಶೆಡ್‌ನಲ್ಲಿ ಇಡಲಾಗಿದ್ದ ವಾಹನಕ್ಕೆ ಶಾರ್ಟ್ ಸರ್ಕ್ನೂಟ್‌ನಿಂದ ಬೆಂಕಿ ತಗಲಿ ಅನಂತರ ಅದು ಇನ್ನೊಂದು ವಾಹನಕ್ಕೂ ಹಬ್ಬಿರುವ ಸಾಧ್ಯತೆ ಇದೆ. ಎರಡು ವಾಹನಗಳು ಸಂಪೂರ್ಣ ಸುಟ್ಟು ಹೋಗಿವೆ ಎಂದು ಸ್ಥಳಕ್ಕೆ ತೆರಳಿದ್ದ ಕದ್ರಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶೆಡ್‌ನಲ್ಲಿ ಒಟ್ಟು 16 ವಾಹನಗಳಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬಂದಿ ಉಳಿದ ವಾಹನಗಳನ್ನು ಶೆಡ್‌ನಿಂದ ಹೊರಕ್ಕೆ ತಂದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಈ ಎಲೆಕ್ಟ್ರಿಕ್ ವಾಹನಗಳನ್ನು (ಬಗ್ಗೀಸ್) ನಿಸರ್ಗಧಾಮದಲ್ಲಿ ಪ್ರವಾಸಿಗರು ಸುತ್ತಾಡಲು ಬಳಕೆ ಮಾಡಲಾಗುತ್ತಿತ್ತು. ಒಟ್ಟು ಸುಮಾರು 20 ಲ.ರೂ. ನಷ್ಟ ಅಂದಾಜಿಸಲಾಗಿದೆ.