ಪುತ್ತೂರು ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
ಪುತ್ತೂರು ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
ರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸಿನಾನ್‌ಗೆ ಪುತ್ತೂರಿನ ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ನೆಕ್ಕಿಲಾಡಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂಟ್ವಾಳ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ರಿಕ್ಷಾದಲ್ಲಿ 18 ಸಾವಿರ ರೂ. ಮೌಲ್ಯದ ನಿಷೇಧಿತ ಎಂಡಿ ಎಂಎಯ ಮಾದಕ ವಸ್ತು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ರಿಕ್ಷಾದಲ್ಲಿದ್ದ ಇಬ್ಬರು ಆರೋಪಿಗಳು ಮಾದಕ ಪದಾರ್ಥವನ್ನು ಸಿನಾನ್ ಎಂಬಾಂತ ನೀಡಿರುವುದಾಗಿ ಹೇಳಿಕೆ ನೀಡಿದ್ದರು.
ತಲೆಮರೆಸಿಕೊಂಡಿದ್ದ ಆರೋಪಿ ಸಿನಾನ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿನಾನ್‌ಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.