ಮಂಗಳೂರಿನಲ್ಲೂ ಪ್ರಾರಂಭಗೊಳ್ಳಲಿದೆ ವಾಟರ್ ಮೆಟ್ರೋ😱
ಮಂಗಳೂರಿನಲ್ಲೂ ಪ್ರಾರಂಭಗೊಳ್ಳಲಿದೆ ವಾಟರ್ ಮೆಟ್ರೋ😱
ಮಂಗಳೂರು: ಕೇರಳದ ಕೊಚ್ಚಿ ಮಾದರಿಯಲ್ಲಿ ಮಂಗಳೂರಿನಲ್ಲೂ ವಾಟರ್ ಮೆಟ್ರೋ ಯೋಜನೆ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಮಾರಿಟೈಮ್ ಬೋರ್ಡ್ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ಸಮಗ್ರವಾದ ಯೋಜನಾ ವರದಿ ರೂಪಿಸಲು ನಿರ್ಧರಿಸಿದೆ. ಈ ಯೋಜನೆಯು ಗುರುಪುರ ಮತ್ತು ನೇತ್ರಾವತಿ ನದಿಗಳ ಎರಡೂ ದಡಗಳಲ್ಲಿ ಬಜಾಲ್ ನಿಂದ ಮರವೂರುವರೆಗೆ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಿದೆ.
ಈ ಯೋಜನೆ ಜಾರಿಗೆ ಬಂದರೆ ಕೊಚ್ಚಿ ನಂತರದ ಭಾರತದ ಎರಡನೇ ಅತಿ ದೊಡ್ಡ ಜಲ ಸಾರಿಗೆ ವ್ಯವಸ್ಥೆ ಇದಾಗಲಿದೆ. ಈ ಯೋಜನೆಯು ಪರಿಸರ ಸ್ನೇಹಿ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.