• 14 ಫೆಬ್ರವರಿ 2025

ನ.9 : ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ಕಚೇರಿ ಉದ್ಘಾಟನೆ

 ನ.9 : ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ಕಚೇರಿ ಉದ್ಘಾಟನೆ
Digiqole Ad

ನ.9 : ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ಕಚೇರಿ ಉದ್ಘಾಟನೆ


ಪೆರುವಾಜೆ : ಬೆಳ್ಳಾರೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಹಿರಿಯ ವಿದ್ಯಾರ್ಥಿ ಸಂಘದ ನೂತನ ಸಮಿತಿಯ ಪದಗ್ರಹಣ ಮತ್ತು ನೂತನ ಕಚೇರಿಯ ಉದ್ಘಾಟನೆ ಸಮಾರಂಭ ನ.9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಾಲಸುಬ್ರಹ್ಮಣ್ಯ ಪಿ.ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಕಚೇರಿ ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ ಮುಖ್ಯ ಭಾಷಣ ಮಾಡಲಿದ್ದಾರೆ. ದ.ಕ.ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ಕುಮಾರ್ ಪೆರುವಾಜೆ ಉಪಸ್ಥಿತರಿರಲಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ