ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಉದಯ ರೈ ಮಾದೋಡಿ
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಉದಯ ರೈ ಮಾದೋಡಿ
ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ, ಸಹಕಾರ ಭಾರತಿ ಪ್ರಮುಖ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ,ಹಾಲಿ ನಿರ್ದೇಶಕರಾದ ಉದಯ ರೈ ಮಾದೋಡಿರವರು ದ್ವಿತೀಯ ಬಾರಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲ ಬೆಂಗಳೂರು ಇದರ 13 ನಿರ್ದೇಶಕರ ಸ್ಥಾನಗಳಿಗೆ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಲದ ಬೆಂಗಳೂರು ಕಚೇರಿಯಲ್ಲಿ ಚುನಾವಣೆ ನಡೆಯಿತು. ಉದಯ ರೈ ಮಾದೋಡಿಯವರು 2018-23ನೇ ಅವಧಿಯಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಲ ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಎರಡನೇ ಅವಧಿಗೆ ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.ಪ್ರಸ್ತುತ ಅವರು ಸಹಕಾರ ಭಾರತಿಯ ಗ್ರಾಹಕ ಪ್ರಕೋಷ್ಟದ ಪ್ರಮುಖ್ ರಾಗಿದ್ದಾರೆ.ಹಲವಾರು ಸಂಘ ಸಂಸ್ಥೆಗಳು, ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಬೆಳಂದೂರು ಗ್ರಾಮದ ಮಾದೋಡಿ ನಿವಾಸಿಯಾಗಿದ್ದಾರೆ.