• 6 ಡಿಸೆಂಬರ್ 2024

ಈಶ್ವರಮಂಗಲ: ಅಕ್ರಮ ಗೋ ಸಾಗಾಟ, ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಪೊಲೀಸರು :

 ಈಶ್ವರಮಂಗಲ: ಅಕ್ರಮ ಗೋ ಸಾಗಾಟ, ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಪೊಲೀಸರು :
Digiqole Ad

ಈಶ್ವರಮಂಗಲ: ಅಕ್ರಮ ಗೋ ಸಾಗಾಟ, ವಾಹನ ತಡೆದು ಗೋವುಗಳನ್ನು ರಕ್ಷಿಸಿದ ಪೊಲೀಸರು :

ಈಶ್ವರಮಂಗಲ: ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ತಡೆದು ನಿಲ್ಲಿಸಿ ಅದರಲ್ಲಿದ್ದ ಗೋವುಗಳನ್ನು ರಕ್ಷಿಸಿದ ಘಟನೆ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗೋ ಸಾಗಾಟದ ಕುರಿತು ಖಚಿತ ಮಾಹಿತಿ ಪಡೆದ ಈಶ್ವರಮಂಗಲ ಠಾಣಾ ಪೊಲೀಸರು ಪಿಕಪ್ ವಾಹನವನ್ನು ಪರಿಶೀಲಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ವಾಹನದಲ್ಲಿದ್ದ ನಾಲ್ಕು ದನಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭ ಈಶರಮಂಗಲ ಪೊಲೀಸರು ತಡೆದು ವಾಹನ ವಶಕ್ಕೆ ಪಡೆದಿದ್ದಾರೆ. ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕರುವೊಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ