• 13 ನವೆಂಬರ್ 2024

ಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದು !

 ಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದು !
Digiqole Ad

ಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದು !

ಅಪರಾಧದಲ್ಲಿ ಭಾಗಿಯಾಗಿರುವ ಪತಿಯೊಂದಿಗೆ ನೆಲೆಸಿದ್ದಾಳೆಂಬ ಮಾತ್ರಕ್ಕೆ ಪತ್ನಿಯನ್ನು ಪ್ರಕರಣದಲ್ಲಿ ಸಹ ಆರೋಪಿಯನ್ನಾಗಿ ಮಾಡಲಾಗದು ಎಂದು ಹೈಕೋರ್ಟ್‌ ಹೇಳಿದೆ.
ಕರ್ನಾಟಕ ಅಬಕಾರಿ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪತಿ ನಾರ್ಬರ್ಟ್‌ ಡಿ’ಸೋಜಾ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಶಾಂತಿ ರೋಚ್‌ ಅವರನ್ನು ಸಹ ಆರೋಪಿಯನ್ನಾಗಿ ಸೇರಿಸಬೇಕೆಂದು ಕೋರಿ ಪ್ರಕರಣದ ದೂರುದಾರ ಆರ್‌.ಕೆ. ಭಟ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
ಈ ವಿಚಾರವಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯ ಹೊರಡಿಸಿದ ಆದೇಶ ಪ್ರಶ್ನಿಸಿ ತುಮಕೂರಿನ ಕುವೆಂಪು ನಗರ ನಿವಾಸಿ ಆರ್‌.ಕೆ. ಭಟ್‌ ಸಲ್ಲಿಸಿದರು. ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ ಆರೋಪಿಯಾದ ನಾರ್ಬರ್ಟ್‌ ಜತೆ ಪತ್ನಿ ಶಾಂತಿ ರೋಚ್‌ ಒಂದೇ ಮನೆಯಲ್ಲಿ ನೆಲೆಸಿದ್ದರು.
ಪತ್ನಿಯೂ ಪತಿಯ ಅಕ್ರಮ ಮದ್ಯ ತಯಾರಿಕೆ ಹಾಗೂ ಮಾರಾಟದಲ್ಲಿ ಸಾಥ್‌ ನೀಡಿದ್ದಳು. ಆಕೆಯೂ ಆ ಬಗ್ಗೆ ಸ್ವಲ್ಪ ಪ್ರಮಾಣದ ಜ್ಞಾನವನ್ನು ಹೊಂದಿದ್ದಳು. ಹೀಗಾಗಿ ಪ್ರಕರಣದಲ್ಲಿ ಆಕೆಯನ್ನು ಸಹ ಆರೋಪಿ ಎಂದು ಪರಿಗಣಿಸಿ ವಿಚಾರಣೆ ಗೊಳಪಡಿಸಬೇಕು ಎಂದು ಮನವಿ ಮಾಡಿದರು. ಸರಕಾರದ ಪರ ವಾದ ಮಂಡಿಸಿದ ವಕೀಲರು ಪತಿಯ ಈ ವಹಿವಾಟು ನಿಸ್ಸಂದೇಹವಾಗಿ ಪತ್ನಿಯೂ ಬಲ್ಲವಳಾಗಿರುತ್ತಾಳೆ. ಈ ನಿಟ್ಟಿನಲ್ಲಿ ಆಕೆಯನ್ನು ಸಹ ಆರೋಪಿ ಎಂದು ಪರಿಗಣನೆ ಮಾಡಬಹುದು ಎಂದರು.

Digiqole Ad

ಈ ಸುದ್ದಿಗಳನ್ನೂ ಓದಿ